ಚೆನ್ನೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ದಿಢೀರನೆ ಏರಿಕೆ
ತಮಿಳುನಾಡು: ಚೆನ್ನೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ತರಕಾರಿ ಬೆಲೆ ಗಗನಕ್ಕೇರಲು ಕಾರಣವಾಗಿದೆ. ಹವಾಮಾನ ವೈಪರೀತ್ಯ, ಸಗಟು ಮಾರುಕಟ್ಟೆಯಿಂದ ತರಕಾರಿ ಲಭ್ಯತೆ ಕೊರತೆ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ಮಾರಾಟಗಾರರು ಆರೋಪಿಸಿದ್ದಾರೆ.
ಈರುಳ್ಳಿ ಕೆ.ಜಿ.ಗೆ 60 ರೂ.ಗೆ ಹಾಗೂ ಟೊಮೆಟೊ ಕೆಜಿಗೆ 85 ರೂ.ಗೆ ಮಾರಾಟವಾಗುತ್ತಿದೆ. ಇದು ಕಳೆದ ವಾರದ ಬೆಲೆಗಿಂತ ಎರಡು ಪಟ್ಟು ಹೆಚ್ಚಾಗಿದೆ.
ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಸಂಗ್ರಹಿಸುವಂತೆ ತಮಿಳುನಾಡು ಸರ್ಕಾರ ಜನರನ್ನು ಒತ್ತಾಯಿಸಿದೆ. ಆದರೆ, ಇಷ್ಟು ಬೆಲೆ ಹೆಚ್ಚಿರುವಾಗ ಸಾಮಾನ್ಯ ಜನರು ತರಕಾರಿ ಖರೀದಿಸುವುದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ





