February 2, 2025

ಬಸವಲಿಂಗ ಸ್ವಾಮಿಜೀ ಆತ್ಮಹತ್ಯೆ ಪ್ರಕರಣ – ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

0

ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಎ 1 ಆರೋಪಿ ಮಾಗಡಿ ತಾಲ್ಲೂಕಿನ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಹಾಗೂ ಎ 2 ಆರೋಪಿ ಯುವತಿ ನೀಲಾಂಬಿಕೆ ಹಾಗೂ ಎ3 ಆರೋಪಿಯಾಗಿರುವ ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ ಹೆಚ್ಚಿನ ವಿಚಾರಣೆಗಾಗಿ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1 ನೇ ಜೆಎಂಸಿ ಕೋರ್ಟ್ ನ್ಯಾಯಮೂರ್ತಿ ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ ಇತ್ತೀಚೆಗೆ ನ್ಯಾಯಾಲಯ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

 

 

Leave a Reply

Your email address will not be published. Required fields are marked *

error: Content is protected !!