ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು – ಮುಂಬೈ ಆಸ್ಪತ್ರೆಗೆ ದಾಖಲು
ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶರದ್ ಪವಾರ್ ಅವರ ಆರೋಗ್ಯವು ಉತ್ತಮವಾಗಿಲ್ಲದ ಕಾರಣ ಅವರನ್ನ ಮುಂದಿನ ಮೂರು ದಿನಗಳ ಕಾಲ ಮುಂಬೈನ ಬ್ರೀಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಪಕ್ಷ ಟ್ವೀಟ್ ಮಾಡಿದೆ.

ಇನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾಜಿರಾವ್ ಗರ್ಜೆ ಅವರು ಅಧಿಕೃತ ಪತ್ರದ ಮೂಲಕ ಮಾಡಿದ ಮನವಿಯ ಪ್ರಕಾರ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಆಸ್ಪತ್ರೆಯ ಹೊರಗೆ ಸೇರಬಾರದು ಎಂದು ಹೇಳಿದೆ.





