ನಟಿ ರಂಭಾ ಕಾರು ಭೀಕರ ಅಪಘಾತ: ರಂಭಾ ಪುತ್ರಿಗೆ ತೀವ್ರ ಗಾಯ

ಕೆನಡಾ:ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ನಟಿ ರಂಭಾ ಅವರ ಕಾರಿಗೆ ಭೀಕರ ಅಪಘಾತವಾಗಿದ್ದು ರಂಭಾ ಪುತ್ರಿ ಸಾಶಾ ತೀವ್ರ ಗಾಯಗೊಂಡಿದ್ದಾರೆ.
ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ರಂಭಾಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಯ ನಂತರ ಅವರು ಮನೆಗೆ ವಾಪಸ್ಸಾಗಿದ್ದಾರೆ. ಆದರೆ, ಮಗಳಿಗೆ ಮಾತ್ರ ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ರಂಭಾ ಮತ್ತು ಪತಿ ಇಂದ್ರಕುಮಾರ್ ಪದ್ಮನಾಥನ್ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊ ದಲ್ಲಿ ನೆಲೆಸಿದ್ದಾರೆ.
ಈ ದಂಪತಿಗೆ ಇಬ್ಬರು ಪುತ್ರಿಯರಿದ್ದು, ಓರ್ವ ಪುತ್ರನಿದ್ದಾನೆ. ಟೊರೊಂಟೊದಲ್ಲೇ ಅವರು ಮಕ್ಕಳಿಗೆ ಶಿಕ್ಷಣ ಕೂಡ ಕೊಡಿಸುತ್ತಿದ್ದಾರೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಕರೆತರುವಾಗ ಕಾರು ಅಪಘಾತಕ್ಕೀಡಾಗಿದೆ. ರಂಭಾ ಚಲಾಯಿಸುತ್ತಿದ್ದ ಕಾರಿ ಬಲ ಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.