ಮೊರ್ಬಿ ಸೇತುವೆ ದುರಂತ – ಮೃತರ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ
ಗುಜರಾತ್: ಭಾನುವಾರದಂದು ಗುಜರಾತಿನ ಮೊರ್ಬಿಯಲ್ಲಿ ಸಂಭವಿಸಿದ ಕೇಬಲ್ ಸೇತುವೆ ಕುಸಿತ ಘಟನೆಯಲ್ಲಿ ಎರಡು ವರ್ಷದ ಮಗು ಸೇರಿದಂತೆ 47 ಮಕ್ಕಳು ಮೃತಪಟ್ಟಿದ್ದು, ಒಟ್ಟು 141 ಮಂದಿ ಸಾವನ್ನಪ್ಪಿದ್ದಾರೆ.
ಮೃತರ ಸಂಬಂಧಿಕರಿಗೆ ರಾಜ್ಯಸರ್ಕಾರದಿಂದ 4 ಲಕ್ಷ ರೂ. ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ರೂ.2 ಲಕ್ಷ, ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.

ಇನ್ನು ಘಟನೆ ಗಾಯಗೊಂಡ 17 ಜನರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ಗುಜರಾತ್ ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.




