March 20, 2026

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಒಕ್ಕೆತ್ತೂರು ದ.ಕ. ಜಿ. ಹಿ. ಪ್ರಾ ಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

0
IMG-20221101-WA0020.jpg

ವಿಟ್ಲ: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರಿನ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಮಕ್ಕಳು ಪ್ರಾರ್ಥನೆ ಮಾಡಿ ಬಳಿಕ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ನಾಡು ನುಡಿಗೆ ಸಂಬಂಧ ಪಟ್ಟ 1 ರಿಂದ 8 ನೇ ತರಗತಿಯ ಮಕ್ಕಳಿಗೆ 3 ವಿಭಾಗಗಳಲ್ಲಿ ಸುಮಾರು 10 ಸ್ಪರ್ಧೆಗಳನ್ನು ಹಾಗೂ ಶಿಕ್ಷಕರಿಗೆ ಸ್ಪರ್ಧೆ ನಡೆಸಲಾಯಿತು.

ಬಳಿಕ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಂಚಾಲಕರು, ವಿಟಿವಿ ಮಾಧ್ಯಮ ಸಂಸ್ಥೆಯ ನಿರ್ದೇಶಕರಾದ ರಾಮ್ ದಾಸ್ ಶೆಟ್ಟಿ ವಿಟ್ಲ, ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ ,ಎಸ್‌ಡಿಎಂಸಿ ಅಧ್ಯಕ್ಷರಾದ ಮೊಹಮ್ಮದ್ ಆರಿಸ್,
ಒಕ್ಕೆತ್ತೂರು ಶಾಲಾ ಮುಖ್ಯ ಶಿಕ್ಷಕರಾದ ಗೀತಾ, ಹಿರಿಯ ಶಿಕ್ಷಕಿ ಮೇರಿ, ಶಾಲಾ ಶಿಕ್ಷಕ ರಾಘವೇಂದ್ರ, ಹಾಗೂ ತೌಸಿಫ್ ಮತ್ತು ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕಾರಿಣಿ ಸದಸ್ಯರಾದ ಜಗನ್ನಾಥ ಶೆಟ್ಟಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷರಾದ ದೀಪಕ್ ಅಮೀನ್, ಜಯಕರ್ನಾಟಕ ಜನಪರ ವೇದಿಕೆ ಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವತ್ ರೈ, ಪುರಂದರ ರೈ, ರಜತ್ ಆಳ್ವ, ಮನೋಜ್ ರೈ ವಿಟ್ಲ ಹಾಗೂ ವಿಟಿವಿ ಸಿಬ್ಬಂದಿಗಳು, ಶಾಲಾ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ, ಶಾಲಾ ಮಕ್ಕಳು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!