March 20, 2026

ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ

0
image_editor_output_image-935014165-1667365587984.jpg

ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ (25) ಕಾಣೆಯಾಗಿದ್ದಾರೆ.

ಭಾನುವಾರ ಸಂಜೆ 7.30ಕ್ಕೆ ಮನೆಯಿಂದ ಕಾರ್‌ನಲ್ಲಿ ತೆರಳಿರುವ ಚಂದ್ರಶೇಖರ್ ಇದುವರೆಗೂ ವಾಪಸ್‌ ಬಂದಿಲ್ಲ ಎಂದು ಅವರ ತಂದೆ ಹೊನ್ನಾಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರೇಣುಕಾಚಾರ್ಯ ಸೇರಿದಂತೆ ಕುಟುಂಬ ಸದಸ್ಯರು ತೀವ್ರ ಹುಡುಕಾಟ ನಡೆಸಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಸ್ನೇಹಿತರು, ಬಂಧುಗಳನ್ನು ವಿಚಾರಿಸಿದರೂ ಪತ್ತೆಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!