ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ
ಕಲಬುರಗಿ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಗ್ರಾಮದ ಹೊರವಲಯದ ಕಬ್ಬಿನಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. 9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು.
ಅತ್ಯಾಚಾರವೆಸಗಿ ಬಾಲಕಿ ಕೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಿಗಾಗಿ ಆಳಂದ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಮೃತ ಬಾಲಕಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಹೈಸ್ಕೂಲ್ಗೆ ಹೋಗಿ ಓದುತ್ತಿದ್ದಳು. ಪರಿಚಿತರಿಂದ ಆಗಿರುವ ಕೃತ್ಯವಾ? ಅಪರಿಚಿತರು ಮಾಡಿರೋದಾ ಅನ್ನೋ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.




