March 20, 2026

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

0
image_editor_output_image-977272618-1667372443355

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟುವಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಜೀಜ್ (55) ಮಹಮ್ಮದ್ ರಫೀಕ್ (39) ಎಂದು ಗುರುತಿಸಲಾಗಿದ್ದು, ಇನ್ನೋರ್ವ ಆರೋಪಿ ಅನ್ವರ್ ಪರಾರಿಯಾಗಿದ್ದಾನೆ.

ಆರೋಪಿಗಳು ಪಿಕಪ್ ವಾಹನದಲ್ಲಿ ಮೂರು ಕರುಗಳು ಹಾಗೂ ಮೂರು ದನಗಳು ಸೇರಿದಂತೆ ಆರು ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪುದುವೆಟ್ಟು ಗ್ರಾಮದ ಬಾಯಿತ್ತಾರ್ ಎಂಬಲ್ಲಿ ವಾಹನ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮ ಜಾನುವಾರು ಸಾಗಾಟ ಕಂಡು ಬಂದಿದೆ.

ಪೊಲೀಸರು ವಾಹನವನ್ನು ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದಿರುವ ಜಾನುವಾರುಗಳ ಒಟ್ಟು ಮೌಲ್ಯ 40,000 ರೂ. ಎಂದು ಅಂದಾಜಿಸಲಾಗಿದ್ದು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!