ಮೃತ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ
ಸುಳ್ಯ: ಮೃತ ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆ ನೇರವೆರಿಸಿದರು.
ಇಂದು ಬೆಳಗ್ಗೆ 9.30ಕ್ಕೆ ದಿ.ಪ್ರವೀಣ್ ಕನಸಿನ ಮನೆಗೆ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ 2.700 ಚ.ಅಡಿಯ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸದರು. ಮೊಗರೋಡಿ ಕನ್ಸ್ ಸ್ಟ್ರೆಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಎಸ್.ಅಂಗಾರ ಶಾಸಕ ಸಂಜೀವ ಮಠಂದೂರು, ಪ್ರವೀಣ್ ಪತ್ನಿ ನೂತನ ಹಾಗೂ ಕುಟುಂಬಿಕರು ಉಪಸ್ಥಿತರಿದ್ದರು.




