ಉಡುಪಿ: ಅಪಘಾತದಲ್ಲಿ ಪಾದಚಾರಿ ಸಾವು – ಆರೋಪಿಗೆ ಶಿಕ್ಷೆ
ಉಡುಪಿ: ಕಂಟೈನರ್ ಲಾರಿ ವಾಹನವನ್ನು ವೇಗವಾಗಿ ಚಲಾಯಿಸಿ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ. ಎಂ.ಎಫ್.ಸಿ ನ್ಯಾಯಾಲಯವು ಕಾರಾಗೃಹ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಯನ್ನು ಅಬೂಬ್ಬಕರ್ ಎಂದು ಗುರುತಿಸಲಾಗಿದೆ.
2021 ಫೆಬ್ರವರಿ 28 ರಂದು ಬ್ರಹ್ಮಾವರ ತಾಲೂಕಿನ ಹಲುವಳ್ಳಿ ಗ್ರಾಮದ ಹೆಬ್ರಿ- ಬ್ರಹ್ಮಾವರ ಮುಖ್ಯ ರಸ್ತೆಯ ಧಾರಣ – ಕಂಬಳ ಎಂಬಲ್ಲಿ ಹೆಬ್ರಿಯಿಂದ ಬ್ರಹ್ಮಾವರ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಬದಿ ಬರುತ್ತಿದ್ದ ಪಾದಾಚಾರಿ ಕೃಷ್ಣ ಪುತ್ರನ್ ಎಂಬುವವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದು, ಈ ಬಗ್ಗೆ ಬ್ರಹ್ಮಾವರ ಠಾಣೆಯ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದಾರೆ.
ಇನ್ನು ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ. ಎಂ. ಎಫ್. ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿಗೆ 2 ವರ್ಷ 6 ತಿಂಗಳು ಕಾರಾಗೃಹ ವಾಸ ಹಾಗೂ 10,000 ರೂ. ದಂಡ ವಿಧಿಸಿದೆ.





