ಬಂಟ್ವಾಳ : ಟಿಪ್ಪರ್ ಲಾರಿ ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿ – ಅಪಾಯದಿಂದ ಪಾರು
ಬಂಟ್ವಾಳ : ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬ ಲ್ಲಿ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.
ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ ಘಟನೆ ನಡೆದಿದೆ.
ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.





