May 11, 2026

ಕಾರವಾರ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು  ಎಳೆದೊಯ್ದ ಮೊಸಳೆಗಳು

0
image_editor_output_image1639695198-1667454364156.jpg

ಕಾರವಾರ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ.

ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ. ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ 2 ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ

Leave a Reply

Your email address will not be published. Required fields are marked *

error: Content is protected !!