May 11, 2026

ಪುತ್ತೂರಿನ ಪಟಾಕಿ ಗೊಡೌನ್ ನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಕರುಣಾಕರ ರೈ ವಿರುದ್ಧ ಸೊಮೋಟೋ ಪ್ರಕರಣ ದಾಖಲು

0
image_editor_output_image-1694773691-1667458160407.jpg

ಪುತ್ತೂರು: ಪುತ್ತೂರಿನ ಪಟಾಕಿ ಗೊಡೌನ್ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ.

ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ ಸಮಯಕ್ಕೆ ಸ್ಪೋಟ ಸಂಭವಿಸಿತ್ತು.

ಪಟಾಕಿ ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿಬಿದ್ದಿದ್ರು. ಆ ಕಟ್ಟಡದಲ್ಲಿರುವ ಎಲ್ಲಾ ಅಂಗಡಿಯವರು ಬಂದ್ ಮಾಡಿ ಹೊರ ಬಂದಿದ್ರು. ದರ್ಬೆಯಲ್ಲಿ ಪಟಾಕಿ ಮಾರುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ.

ಆದರೆ ಕರುಣಾಕರ ರೈ ತನ್ನ ಮನೆಯ ಉಪಯೋಗಕ್ಕೆ ಇಟ್ಟ ಪಟಾಕಿ ಎಂದು ಹೇಳಿಕೆ ನೀಡಿದ್ದರು. ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಘಟನೆ ನಡೆದಿದೆಯ ಅಥವ ಬೆಂಕಿ ಆಕಸ್ಮಿಕ ನಡೆದಿದೆಯ ಎನ್ನುವ ಬಗ್ಗೆ ತನಿಖೆಯಿಂದ ಗೊತ್ತಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!