March 22, 2026

ಬಂಟ್ವಾಳ: ಶಾಲೆಗೆ ಹೋಗದೆ ನಾಪತ್ತೆಯಾಗಿದ್ದ ಬಾಲಕಿ ಚಿಕ್ಕಮಗಳೂರಿನಲ್ಲಿ ಪತ್ತೆ

0
image_editor_output_image-144518725-1667462872601.jpg

ಬಂಟ್ವಾಳ: ಶಾಲೆಗೆಂದು ಹೋದ ಬಾಲಕಿ ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಸದ್ಯ ನಾಪತ್ತೆಯಾಗಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿರುವ ಪೃಥ್ವಿ (12) ಕಾಣೆಯಾಗಿದ್ದಳು.

ಪುಟ್ಟರಾಜ್ ಅವರ ಮಗಳು ಪೃಥ್ವಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿತ್ತಿದ್ದು, ಕಲ್ಲಡ್ಕ ದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಬಾಲಕಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು.

ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದಾಗ ನಾಪತ್ತೆಯಾದ ಬಗ್ಗೆ ತಿಳಿದುಬಂದಿತ್ತು. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಸದ್ಯ ಈ ಪ್ರಕರಣ ಸುಖಾಂತ್ಯ ಕಂಡಿದ್ದು, ಬಾಲಕಿಯು ಚಿಕ್ಕಮಗಳೂರಿನಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!