ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆಯೋಜಿಸಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಅವರ ಕಾಲಿಗೆ ಗಾಯವಾಗಿದೆ.
ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ ಇಮ್ರಾನ್ ಖಾನ್ ಅವರನ್ನು ಭದ್ರತಾ ಸಿಬ್ಬಂದಿ ಕಂಟೈನರ್‌ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಮ್ರಾನ್ ಖಾನ್ ಅವರು ಗುರುವಾರ ಪಂಜಾಬ್ ಪ್ರಾಂತ್ಯದ ವಜೀರಾಬಾದ್‌ನಲ್ಲಿ ‘ಲಾಂಗ್ ಮಾರ್ಚ್’ ರ್ಯಾಲಿ ನಡೆಸಿದರು. ಜಾಫರಾಲಿ ಖಾನ್ ಚೌಕ್‌ನಲ್ಲಿ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ತಿಳಿಸಿವೆ.
ರ‍್ಯಾಲಿ ನಿಮಿತ್ತ ತೆರೆದ ವಾಹನದಲ್ಲಿ ಸಂಚರಿಸುವ ವೇಳೆಎ ಈ ಗುಂಡಿನ ದಾಳಿ ನಡೆದಿದ್ದು, ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿಮಾಡಿವೆ.