February 3, 2026

ವಿಟ್ಲ :ಪ್ರೀತಿಸುವ ನೆಪ ಮಾಡಿ ಅತ್ಯಾಚಾರ – ಆರೋಪಿಯ ಬಂಧನ

0
image_editor_output_image1258549082-1667483577729

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ.

ಕಬಕ ನಿವಾಸಿ ಸಂಶೀರ್ ಎಂಬಾತ ಬಂಧಿತ ಆರೋಪಿ. ಆರೋಪಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಈ ಹಿನ್ನೆಲೆ ಬಂದಿರುವ ದೂರಿನಂತೆ ಈತನನ್ನು ವಿಟ್ಲ ಪೋಲಿಸ್ ಇನ್ಸ್‌ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ಎಸ್‌ಐ ಸಂದೀಪ್ ಶೆಟ್ಟಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.

Leave a Reply

Your email address will not be published. Required fields are marked *

error: Content is protected !!