ಸುಳ್ಯ: ಹೃದಯಾಘಾತದಿಂದ 7ವರ್ಷದ ಬಾಲಕ ಮೃತ್ಯು
ಸುಳ್ಯ: ಹೃದಯಾಘಾತಾದಿಂದಾಗಿ 7ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಕುಂಟಿಕಾನದಲ್ಲಿ ನಡೆದಿದೆ.
ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ . ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. (7) ಮೃತ ಬಾಲಕ.
ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು.
ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು , ತತ್‌ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು , ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು .
ಮೃತ ಬಾಲಕ ತಂದೆ, ತಾಯಿ ಸಹೋದರರನ್ನು ಅಗಲಿದ್ದಾರೆ.




