February 3, 2026

ಬಸ್‌, ಕಾರಿನ ನಡುವೆ ಅಪಘಾತ: ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತ್ಯು

0
Screenshot_2022-11-04-10-02-16-81_680d03679600f7af0b4c700c6b270fe7.jpg

ಬೆತುಲ್ (ಮಧ್ಯ ಪ್ರದೇಶ): ಬಸ್‌ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿರುವ ದುರಂತ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಶುಕ್ರವಾರ ವರದಿಯಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ ದೂರದಲ್ಲಿರುವ ಭೈನ್ಸ್‌ದೇಹಿ ರಸ್ತೆಯಲ್ಲಿ ತಡರಾತ್ರಿ 2ಕ್ಕೆ ಅಪಘಾತ ಸಂಭವಿಸಿದೆ. ಈ ವೇಳೆ 6 ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ನಿಯಂತ್ರಣ ಕೊಠಡಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಶಿವರಾಜ್‌ ಸಿಂಗ್‌ ಠಾಕೂರ್‌ ತಿಳಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತ ಸಂಭವಿಸಿದಾಗ ಕಾರಿನ ಚಾಲಕ ನಿದ್ರೆ ಮಂಪರಿನಲ್ಲಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೃತಪಟ್ಟವರೆಲ್ಲರೂ ಕಾರ್ಮಿಕರಾಗಿದ್ದು, ಮಹಾರಾಷ್ಟ್ರದ ಅಮರಾವತಿಯಿಂದ ವಾಪಸ್‌ ಆಗುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!