February 3, 2026

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಿಕಾ ವಿತರಕ ಮೃತ್ಯು

0
image_editor_output_image-1549296873-1667555651339.jpg

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬೈಂದೂರಿನ ಉಪ್ಪುಂದ ಅರೆಹೊಳೆ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕ ಗಿರೀಶ ಮೋಗವೀರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವ್ಯಕ್ತಿ.

ಮೃತ ಯುವಕ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ ಗಿರೀಶ ಮೋಗವೀರ (27) ಎಂದು ತಿಳಿದು ಬಂದಿದೆ. ಗಿರೀಶ್ ನ.2 ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಕೊಂಡು ಮನೆ ಕಡೆಗೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!