March 20, 2026

ಪ್ರಮೋದ್ ಮುತಾಲಿಕ್‌ಗೆ ಜೀವ ಬೆದರಿಕೆ – ಪೊಲೀಸರಿಗೆ ದೂರು

0
IMG-20221104-WA0023.jpg

ಬೆಂಗಳೂರು: ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಮೋದ್ ಮುತಾಲಿಕ್, ನನಗೆ ಜೀವ ಬೆದರಿಕೆಗಳು ಬರುತ್ತಿವೆ. ಬೇರೆ ಬೇರೆ ನಂಬರ್ ನಿಂದ ಕರೆ ಮಾಡಿ, ಜೀವ ಬೆದರಿಕೆ ಕರೆಗಳು ಬರುತ್ತಿವೆ. ತುಂಡು ತುಂಡು ಮಾಡಿ ಬಿಸಾಕಿತ್ತೇವೆ. ಬೋ…ಮಗನೆ ಅಂತೆಲ್ಲ ಅವಾಚ್ಯ ಶಬ್ದ ಬಳಕೆ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ದೂರು ನೀಡಿದ್ದೇನೆ ಎಂದರು.

ಇನ್ನು ಉರ್ದು ಮಿಶ್ರಿತ ಮಂಗಳೂರು ಕನ್ನಡದಲ್ಲಿ ನನಗೆ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ ಬಂದ ಎಲ್ಲಾ ನಂಬರ್ ಗಳನ್ನು ನಾನು ಹುಕ್ಕೇರಿ ಪೊಲೀಸರಿಗೆ ನೀಡಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!