December 19, 2025

ಕರೀಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ:
9 ಮಂದಿ ಮೃತ್ಯು

0
image_editor_output_image2078549417-1636615560331.jpg

ಗುವಾಹತಿ: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಕರೀಂಗಂಜ್ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 9 ಮಂದಿ ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಂತ್ರಸ್ತರು ಛಾತ್ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು ಎನ್ನಲಾಗುತ್ತಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!