ಬಸ್‌ಗೆ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಅಪಘಾತದಲ್ಲಿ (Accident) 39 ವರ್ಷದ ರಮೇಶ್ ಎಂಬ ವ್ಯಕ್ತಿ ಸಾವನ್ನಪ್ಪಿರೋ ಘಟನೆ ತಡರಾತ್ರಿ ನಡೆದಿದೆ. ಮಧ್ಯರಾತ್ರಿ 1:30 ರ ಸುಮಾರಿಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಜ್‌ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್‌ಗೆ ಹೋಗ್ತಿತ್ತು.
ಈ ವೇಳೆ ಬೈಕ್‌ನಲ್ಲಿ ಹೋಗ್ತಿದ್ದ ರಮೇಶ್, ಬಸ್ ಓವರ್ ಟೇಕ್ ಮಾಡಿ ಬಲತಿರುವು ಪಡೆದುಕೊಳ್ಳೋಕೆ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.




