ಬೆಂಗಳೂರು:ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿರುವ ಆರ್ ಡಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ 9 ವರ್ಷದ ನಿಶಿತಾ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.