ವಿಟ್ಲದಲ್ಲಿ ಯುವತಿ ಕೆರೆಗೆ ಹಾರಿ ಸಾವನ್ನಪ್ಪಿದ ಪ್ರಕರಣ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ವಿಟ್ಲದಲ್ಲಿ ಯುವತಿಯೊಬ್ಬಳು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 10 ರಂದು ನಾಪತ್ತೆಯಾಗಿದ್ದ ನಿಶ್ಮಿತಾ (22) ಅವರ ಮೃತದೇಹ ಮರುದಿನ ವಿಟ್ಲದ ಕೆರೆಯಲ್ಲಿ ಪತ್ತೆಯಾಗಿತ್ತು.
ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್‌ನಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಬಗ್ಗೆ ಉಲ್ಲೇಖಿಸಲಾಗಿದೆ.
ಇನ್ನು ಮಗಳ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಬಗ್ಗೆ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಹಾಗೂ ಕೇಪುವಿನ ರಕ್ಷಿತ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.





