March 20, 2026

ಧ್ಯಾನದ ವಿಚಾರದಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ – ಸಿದ್ದರಾಮಯ್ಯಗೆ ಸಚಿವ ನಾಗೇಶ್ ತಿರುಗೇಟು

0
IMG-20221105-WA0018.jpg

ಬೆಂಗಳೂರು: ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ ಎಂದು ಶಾಲೆಗಳಲ್ಲಿ ಧ್ಯಾನ ವಿಚಾರಕ್ಕೆ ಟೀಕೆ ಮಾಡಿದ್ದ ಸಿದ್ದರಾಮಯ್ಯ ವಿರುದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ನಾಗೇಶ್, ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೊರೊನಾ ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿದ್ದು, ಕೊರೊನಾ ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದರು.

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!