March 22, 2026

ಮಂಗಳೂರು: ನಳಿನ್ ಕುಮಾರ್ ಕಟೀಲ್‌ಗೆ ಅನಾರೋಗ್ಯ – 10 ದಿನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಂಸದ

0
IMG-20221106-WA0040.jpg

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅನಾರೋಗ್ಯದಿಂದಿದ್ದಾರೆ ಎಂದು ವರದಿಯಾಗಿದ್ದು, ಈ ಕುರಿತು ಅವರು ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!