February 3, 2026

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

0
Screenshot_2022-11-07-13-29-55-72_680d03679600f7af0b4c700c6b270fe7.jpg

ಪಟ್ನಾ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದವರನ್ನು ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.

ತೆಲ್ಟಾದಲ್ಲಿರುವ ಮನೆಯ ಹೊರಗೆ ಕುಳಿತಿದ್ದ ವೇಳೆ ಸಂಜೀವ್‌ ಮಿಶ್ರಾ ಅವರ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ.

ಅವರಿಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!