ಅತ್ಯಾಚಾರದ ಆರೋಪ: ಶ್ರೀಲಂಕಾ ಬ್ಯಾಟರ್ ಕ್ರಿಕೆಟ್ನಿಂದ ಅಮಾನತು
ಕೊಲಂಬೊ: ಅತ್ಯಾಚಾರದ ಆರೋಪ ಕೇಳಿ ಬಂದಿರುವ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಕ್ರಿಕೆಟ್ನಿಂದ ಅಮಾನತು ಮಾಡಲಾಗಿದೆ.
ಎಲ್ಲ ಪ್ರಕಾರದ ಕ್ರಿಕೆಟ್ಗಳಿಂದ ಗುಣತಿಲಕ ಅವರನ್ನು ಅಮಾನತು ಮಾಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದರು.
ರೋಸ್ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.