March 20, 2026

ಉಡುಪಿ: 3 ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆ – ಸಿಎಂ ಬೊಮ್ಮಾಯಿ ಘೋಷಣೆ

0
bommai.jpg

ಉಡುಪಿ: ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ನಡೆದ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ.

ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿದಾಗ ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಇನ್ನು ಸುಮಾರು ಪ್ರತಿ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಣೆ ಮಾಡುವಾಗ ಸುಮಾರು 152 ಕೋಟಿ ರೂಪಾಯಿ ಸರ್ಕಾರಕ್ಕೆ ವಿಶೇಷ ಖರ್ಚು ಬರಲಿದ್ದು ಸಚಿವ ಕೋಟರವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೇಕ ಸಭೆಗಳು ನಡೆದಿತ್ತು.

Leave a Reply

Your email address will not be published. Required fields are marked *

error: Content is protected !!