ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು
ಬೆಂಗಳೂರು: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 7 ಬೋಗಿಗಳು ಹಳಿ ತಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇಂದು ಮುಂಜಾನೆ 4.45ರ ಸುಮಾರಿಗೆ .ಧರ್ಮಪುರಿಯ ತೊಪ್ಪೂರು ಬಳಿ 7 ಬೋಗಿಗಳು ಹಳಿ ತಪ್ಪಿವೆ.
ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು-ಸಿವಾಡಿ ಮಧ್ಯೆ ಹಳಿಯ ಬಂಡೆಗಳು ಉರುಳಿಬಿದ್ದ ಪರಿಣಾಮ ರೈಲು ಹಳಿ ತಪ್ಪಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ಸಾವು -ನೋವು ವರದಿಯಾಗಿಲ್ಲ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ.





