February 3, 2026

ಚಾಲಕನ ನಿಯಂತ್ರಣ ತಪ್ಪಿ ಕಾರು  ಡಿವೈಡರ್ ಗೆ ಢಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

0
image_editor_output_image-1382280993-1667885300763.jpg

ಚಿತ್ರದುರ್ಗ: ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕು ಚಿಕ್ಕಬೆನ್ನೂರು ಬಳಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.

ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರ ಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಾಯಾಳು ಸಚ್ಚಿನ್ ಬಾರ್ವಿ ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!