February 3, 2026

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

0
image_editor_output_image-279098310-1667895043622.jpg

ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಚಿತ್ರಾವತಿ ಬಳಿ ನಡೆದಿದೆ.

ಚಿತ್ರಾವತಿ ಬಳಿಯ ಡಿಎಡ್ ಕಾಲೇಜು ಬಳಿ ರಾಗಿ ಹೊಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಅರೆ ಬೆತ್ತಲೆಯಾಗಿ ಅಂಗಾತ ಮಲಗಿ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆಯ ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಇನ್ನೂ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಡಿವೈಎಸ್‍ಪಿ ವಾಸುದೇವ್, ಸಿಪಿಐ ರಾಜು ಹಾದಿಯಾಗಿ ಎಸ್‍ಐ ಪ್ರದೀಪ್ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!