March 20, 2026

ಮಂಗಳೂರು: ಶಾಲಾ ವಿದ್ಯಾರ್ಥಿಗೆ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ಮಾರಕ ಹಲ್ಲೆ – ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

0
IMG-20221108-WA0031.jpg

ಮಂಗಳೂರು: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿ ಸಭಾನ್ ಮತ್ತು ಅದೇ ಶಾಲೆಯ ಮತ್ತೋರ್ವ ವಿದ್ಯಾರ್ಥಿಯ ನಡುವೆ ಸೋಮವಾರ ಯಾವುದೋ ಕಾರಣಕ್ಕೆ ಜಗಲ ಉಂಟಾಗಿತ್ತು ಎನ್ನಲಾಗಿದೆ. ಇದನ್ನು ನೆಪವಾಗಿಟ್ಟು ಕೊಂಡು ಮತ್ತೋರ್ವ ವಿದ್ಯಾರ್ಥಿಯ ಕಡೆಯ ಮಹಿಳೆ ಸಹಿತ ತಂಡವೊಂದು ಇಂದು ಶಾಲೆ ಬಿಟ್ಟು ಮನೆಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಭಾನ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದೆ.

ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿ ಜಸೀಲ್ ಮತ್ತು ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ವಿದ್ಯಾರ್ಥಿಗೆ ಗಂಭೀರವಾಗಿ ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರಿಗೆ ನೀಡಿದ ದೂರಿನಿಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!