March 20, 2026

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

0
Lohithaswa01.jpg

ಬೆಂಗಳೂರು: ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ (80) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ.

ಟಿ.ಎಸ್. ಲೋಹಿತಾಶ್ವ ಅವರಿಗೆ ಅ. 10 ರಂದು ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ.

ತುಮಕೂರಿನ ತೊಂಡಗೆರೆ ಮೂಲದ ಲೋಹಿತಾಶ್ವ ಅವರು, ಚಲನಚಿತ್ರ ರಂಗದಲ್ಲಿ ನಟರಾಗಿ, ನಾಟಕಕಾರರಾಗಿ ಗಮನ ಸೆಳೆದಿದ್ದಾರೆ.

500ಕ್ಕೂ ಅಧಿಕ ಕನ್ನಡ ಚಲನಚಿತ್ರ, ರಂಗನಾಟಕ ಮತ್ತು ದೂರದರ್ಶನ ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!