March 20, 2026

ಬೆಳ್ತಂಗಡಿ: ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಅವಘಡ: ಒಬ್ಬ ಮೃತ್ಯು, ಮತ್ತೊಬ್ಬ ಗಂಭೀರ

0
IMG-20221108-WA0008.jpg

ಬೆಳ್ತಂಗಡಿ: ಬಿ.ಎಮ್.ಎಸ್ ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ವೇಳೆ ನಡೆದ ವಿದ್ಯುತ್ ಅವಘಡದಲ್ಲಿ ಓರ್ವ ಸಾವನ್ನಪ್ಪಿದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ (32) ಸಾವನ್ನಪ್ಪಿದವರು ಹಾಗೂ ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್(25) ಗಂಭೀರ ಗಾಯಗಾಯಗೊಂಡಿದ್ದಾರೆ.

ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕ್ವಾಂಟ್ರರ್ಟ್ ನೀಡಿದ್ದು, ಅದರಂತೆ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಇಂದು ಸಂಜೆ ಅಳವಡಿಸುತ್ತಿದ್ದರು. ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು, ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾನೆ‌. ಘಟನೆ ಮಾಹಿತಿ ಪಡೆದು ಸಾವಿರಾರು ಮಂದಿ ಜಮಾಯಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!