March 20, 2026

ಅನಾರೋಗ್ಯದಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವನ್ನು ಕೊಂದ ತಾಯಿ

0
image_editor_output_image522438438-1667964903646.jpg

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವನ್ನು ತಾಯಿಯೇ ಕೊಂದಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.

ವಾಡಿ ಆದಂಪುರ ಗ್ರಾಮದ ನಿವಾಸಿಯಾಗಿರುವ 26 ವರ್ಷದ ಮಹಿಳೆ ತನ್ನ ಚಿಕ್ಕಪ್ಪನೊಂದಿಗೆ ಕಳೆದ ತಿಂಗಳು ಮಗುವನ್ನು ಚಿಕಿತ್ಸೆಗಾಗಿ ತೆಲ್ಹಾರ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದಿದ್ದರು. ನಂತರ ಮಗುವಿನ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಅಕೋಲಾದ ಜಿಲ್ಲಾ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಂತರ ಮರಣೋತ್ತರ ಪರೀಕ್ಷೆ ವೇಳೆ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ವಿಚಾರಣೆ ವೇಳೆ ತಾಯಿಯೇ ಮಗುವನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಹತ್ಯೆಗೈಯ್ಯಲು ಕಾರಣವೇನೆಂಬುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಇದೀಗ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!