ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಢಿಕ್ಕಿ: ಮಹಿಳೆ ಸಾವು
ಗಾಂಧೀನಗರ: ಗುಜರಾತ್‍ನ ಆನಂದ್ ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಆನಂದ್ ರೈಲ್ವೆ ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ಸಂಜೆ 4.37ಕ್ಕೆ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್‍ನ ನಿವಾಸಿಯಾಗಿರುವ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಅವರು, ಆನಂದ್‍ನಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು.
ಈ ವೇಳೆ ಆನಂದ್ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ಪ್ರೆಸ್ ಮಹಿಳೆ ಮೇಲೆ ಹರಿದಿದೆ. ರೈಲು ಗಾಂಧಿನಗರದಿಂದ ಮುಂಬೈ ಸೆಂಟ್ರಲ್‍ಗೆ ತೆರಳುತ್ತಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆನಂದ್ ನಿಲ್ದಾಣದಲ್ಲಿ ನಿಲ್ಲಿಸುವುದಿಲ್ಲ.




