March 20, 2026
image_editor_output_image758934721-1667984858961.jpg

ನಿಟ್ಟೆ: ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಯಾ ಗ್ರಾಮದ ಕೇಪುಲ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಶಾ (23) ಎಂದು ಗುರುತಿಸಲಾಗಿದೆ.

ಮನೆ ಸಮೀಪದ ಹಾಡಿಯಲ್ಲಿ ನಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಮುಲ್ಕಿ ಠಾಣೆ ವ್ಯಾಪ್ತಿಯಲ್ಲಿ ನಿಶಾ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದ. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಶಾ, ನಿಟ್ಟೆಯ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!