February 3, 2026

ಬಂಟ್ವಾಳ: ಅಪರಿಚಿತ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image934886696-1668056886121.jpg

ಬಂಟ್ವಾಳ: ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 40 ರಿಂದ 45 ವರ್ಷದ ವ್ಯಕ್ತಿ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೋಲಿಸ್ ಠಾಣೆಯನ್ನು ಸಂಪರ್ಕ ಮಾಡಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!