March 21, 2026

ಪರೀಕ್ಷೆಯಲ್ಲಿ ಕಡಿಮೆ ಅಂಕ: ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

0
image_editor_output_image518946950-1668058231324.jpg

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ.

ಈ ವಿಚಾರದಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!