ಎರಡು ಬಸ್‍ಗಳು ಢಿಕ್ಕಿ: ಬಾಲಕಿ ಸೇರಿದಂತೆ ಮೂವರು ಸಾವು, 17 ಮಂದಿಗೆ ಗಾಯ
ಶ್ರೀನಗರ: ಎರಡು ಬಸ್‍ಗಳು ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಓವರ್‌ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ ಅಪಘಾತ ಸಂಭವಿಸಿದೆ.
ಗಾಯಗೊಂಡವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ.




