ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿಯಂತೆ ಧ್ವಂಸ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ‘ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಸಹ ಧ್ವಂಸ ಮಾಡಲಾಗುವುದು’ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.




