June 13, 2026

ಶಿರಸಿ | ಖಾಸಗಿ ಶಾಲೆಯ ಬಸ್ ಪಲ್ಟಿ: ಮಹಿಳೆ ಮೃತ್ಯು

0
image_editor_output_image1055195867-1668151642473.jpg

ಶಿರಸಿ: ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಬುಗುಡಿಕೊಪ್ಪ ಸಮೀಪ ಶುಕ್ರವಾರ ಖಾಸಗಿ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ರಾಣೆಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರ ಶಾಲೆಯ ಸಿಬ್ಬಂದಿ ಕಸ್ತೂರಮ್ಮ (60) ಮೃತರು. ರಜೆ ಇದ್ದ ಕಾರಣ ಶಾಲೆಯ ಸಿಬ್ಬಂದಿ ರಾಣೆಬೆನ್ನೂರಿನಿಂದ ಶಿರಸಿಗೆ ಪ್ರವಾಸ ನಿಮಿತ್ತ ಬರುವ ವೇಳೆ ದುರ್ಘಟನೆ ಸಂಭವಿಸಿದೆ.

‘ಬಸ್ ನಲ್ಲಿ ಒಟ್ಟೂ 13 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಒಬ್ಬರು ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ’ ಎಂದು ಬನವಾಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!