March 20, 2026

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು: ಕೈಕಂಬದ ಸಲ್ಮಾನ್ ಮೃತ್ಯು

0
IMG-20221111-WA0073

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ.

ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆಯ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್‌ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!