ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಆರು ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಭಧಿಸಿದಂತೆ ಆರು ಮಂದಿ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಶುಕ್ರವಾರ ಆದೇಶಿಸಿದೆ.
ಹಂತಕರಾದ ನಳಿನಿ ಶ್ರೀಹರನ್, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಇನ್ನು ಇವರೆಲ್ಲರ ಬಿಡುಗಡೆ ಕೋರಿ ತಮಿಳುನಾಡು ಸರ್ಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದು, ಇದನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಆರು ಮಂದಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.
ಪ್ರಕರಣದ ಇನ್ನೊಬ್ಬ ಆರೋಪಿ ಪೇರಾರಿವಾಳನ್‌ನನ್ನು ಸುಪ್ರೀಂಕೋರ್ಟ್ ಕಳೆದ ಮೇಯಲ್ಲೇ ಬಿಡುಗಡೆಗೆ ಆದೇಶಿಸಿತ್ತು.





