ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ಬಸವಕಲ್ಯಾಣ: ತಾಲ್ಲೂಕಿನ ಇಸ್ಲಾಂಪುರದ ಆರತಿ ಕನಾಟೆ (28) ಎಂಬುವರು ಆನ್‌ಲೈನ್‌ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ, ವಂಚನೆಗೆ ಒಳಗಾಗಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಆರತಿ ಅವರು ಆನ್‌ಲೈನ್ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಹಣ ಹೂಡಿಕೆ ಮಾಡಿದ್ದಾರೆ. ಮನೆಯಲ್ಲೇ ಕೂತು ಉದ್ಯೋಗ ಮಾಡಲು ಹಣ ಹೂಡಿಕೆ ಮಾಡಿ ಎಂದ ಕಾರಣ ಅವರು ₹ 1 ಸಾವಿರದಿಂದ ₹2.50 ಲಕ್ಷದವರೆಗೆ ಆನ್‌ಲೈನ್ ಮೂಲಕ ಹಣ ಕಳುಹಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.




