May 17, 2026

ಮುರುಘಾಶ್ರೀ ವಿರುದ್ಧ ದೂರು ನೀಡಿದ್ದ ಮಹಿಳೆಯ ಬಂಧನ

0
image_editor_output_image638121919-1668230786469.jpg

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಪಿತೂರಿ ನಡೆದಿದ್ಯಾ ಅನ್ನೋ ಅನುಮಾನ ಶುರುವಾಗಿದೆ. 2ನೇ ಪೋಕ್ಸೋ ಕೇಸ್ ದೂರು ನೀಡಿದ್ದ ಮಹಿಳೆಯನ್ನೇ ಇದೀಗ ಬಂಧಿಸಲಾಗಿದೆ.

ಮುರುಘಾಶ್ರೀ ವಿರುದ್ಧ ದೂರು ನೀಡಿದ್ದ ಮಠದ ಅಡುಗೆ ಸಹಾಯಕಿಯನ್ನ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುರುಘಾಶ್ರೀ ವಿರುದ್ಧ ಮೊದಲ ಕೇಸ್‍ನ ತನಿಖೆ ಮುಗಿಸಿರುವ ಪೊಲೀಸರು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಿದ್ರು. ಇದರ ಬೆನ್ನಲ್ಲೇ ಜೈಲಲ್ಲಿರುವ ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿತ್ತು.

ಇತ್ತೀಚೆಗೆ ವೈರಲ್ ಆಗಿದ್ದ ಮಠದ ಶಿಕ್ಷಕ ಬಸವರಾಜೆಂದ್ರ ಹಾಗೂ ಬಾಲಕಿಯೊಬ್ಬಳು ಮುರುಘಾ ಶ್ರೀ ವಿರುದ್ಧ ಸುಳ್ಳು ಕೇಸ್ ದಾಖಲಿಸುವಂತೆ ಪ್ರಚೋದಿಸಿದ್ದ ಆಡಿಯೋ ಎಲ್ಲೆಡೆ ಭಾರೀ ಕೋಲಾಹಲ ಸೃಷ್ಟಿಸಿತ್ತು. ಹೀಗಾಗಿ ಆ ಆಡಿಯೋ ಕೇಳಿದ್ದ ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರನ್ನು ನೀಡಿದರು

Leave a Reply

Your email address will not be published. Required fields are marked *

error: Content is protected !!