February 4, 2026

ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ತಂದಿದ್ದ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಸಾವು

0
image_editor_output_image1213950979-1668231206569.jpg

ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ತಂದಿದ್ದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್(46) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸನಗೌಡನನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಕರೆತಂದಿದ್ದರು. ಆಗ ವಿಚಾರಣೆ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಸನಗೌಡ ಪಾಟೀಲ್ ಗಾಂಜಾ ಮಾರಾಟ ಮಾಡುತ್ತಿದ್ದನು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ ಕೂಡಲೇ ಈತನನ್ನು ವಿಚಾರಣೆಗೆ ಕರೆತಂದಿದ್ದರು.‌ ಈತನಿಗೆ ವಾಂತಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಸದೇ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!