ಬಾಲಕಿಯರಿಗೆ ಲೈಂಗಿಕ ಕಿರುಕುಳ: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನ ಬಂಧನ
ಬೆಂಗಳೂರು: 15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಾಳ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ ಶಿಕ್ಷಕ, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ.
ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಹೇಳಿದರು.




